Breaking
21 Apr 2026, Tue

ದ್ವಿಚಕ್ರ ವಾಹನ ಡಿಕ್ಕಿ: ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಸಾವು

ಬಂಟ್ವಾಳ: ದ್ವಿಚಕ್ರ ವಾಹನಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಏ. 14 ರಂದು ಬಿ.ಸಿ.ರೋಡು- ಕಡೂರು ರಾಷ್ಟ್ರೀಯ ಹೆದ್ದಾರಿಯ ವಗ್ಗದಲ್ಲಿ ನಡೆದಿದೆ.

ಮೃತಪಟ್ಟ ವ್ಯಕ್ತಿಯನ್ನು ವಗ್ಗ ನಿವಾಸಿ ಜಗದೀಶ ಪೂಜಾರಿ ಎಂದು ಗುರುತಿಸಲಾಗಿದೆ.

ಇಡ್ಲಿ ವ್ಯಾಪಾರಸ್ಥರಾಗಿದ್ದ ಜಗದೀಶ್‌ ಅವರು ವಗ್ಗದ ರೆಸ್ಟೋರೆಂಟ್ ಗೆ ಹೋಗಿ ವ್ಯಾಪಾರದ ಹಣವನ್ನು ಪಡೆದು ಬಳಿಕ ಬಿ.ಸಿ.ರೋಡು- ಕಡೂರು ರಾಷ್ಟ್ರೀಯ ಹೆದ್ದಾರಿಯನ್ನು ದಾಟುತ್ತಿದ್ದ ವೇಳೆ ಬಿ.ಸಿ.ರೋಡು ಕಡೆಯಿಂದ ಬೆಳ್ತಂಗಡಿ ಕಡೆಗೆ ಸಾಗುತ್ತಿದ್ದ ಮೊಹಮದ್ ಯಾಸೀನ್ ಅವರ ಸ್ಕೂಟರ್ ಡಿಕ್ಕಿ ಹೊಡೆದಿದೆ.

ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಜಗದೀಶ್‌ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೊಲೀಸ್ ಭೇಟಿ ನೀಡಿ‌ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *