Breaking
5 Aug 2026, Wed

23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಉಡುಪಿ: ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ಕಳೆದ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಲ್ಪೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಬೆಂಗಳೂರಿನ ಶಿವನಗರ ನಿವಾಸಿ ಮೊಹಮ್ಮದ್ ಎಂಬವರ ಪುತ್ರ ಎಂ. ಬಾಬು (52) ಎಂದು ಗುರುತಿಸಲಾಗಿದೆ.

ಆರೋಪಿಯ ವಿರುದ್ಧ ಪ್ರಕರಣ ದಾಖಲಾಗಿದ್ದು, ಆತ ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದನು. ಕಳೆದ ಐದು ತಿಂಗಳಿಂದ ಪೊಲೀಸರು ತೀವ್ರ ಶೋಧ ಕಾರ್ಯಾಚರಣೆ ನಡೆಸಿದ್ದು, ಖಚಿತ ಮಾಹಿತಿ ಮೇರೆಗೆ ಏಪ್ರಿಲ್ 14ರಂದು ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ಆರೋಪಿಯನ್ನು ಪತ್ತೆಹಚ್ಚಿ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯವು ಆರೋಪಿಗೆ ಏಪ್ರಿಲ್ 28ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

Leave a Reply

Your email address will not be published. Required fields are marked *