Breaking
19 Sep 2026, Sat

ರಸ್ತೆ ದಾಟುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಮಹಿಳೆ ಸ್ಥಳದಲ್ಲೇ ಸಾವು

ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ಸಮೀಪದ ವಂಡ್ಸೆಯಲ್ಲಿ ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರಿಗೆ ಕಾರು ಡಿಕ್ಕಿಯಾಗಿ ಮಹಿಳೆ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

ಮೃತಪಟ್ಟ ಮಹಿಳೆಯನ್ನು ವಂಡ್ಸೆಯಲ್ಲಿ ಹಿಟ್ಟಿನ ಗಿರಣಿ ನಡೆಸುತ್ತಾ ಜೀವನ ಸಾಗಿಸುತ್ತಿದ್ದ ಶಶಿಕಲಾ ಮೊಗವೀರ (50) ಎಂದು ಗುರುತಿಸಲಾಗಿದೆ.

ಏ. 14ರಂದು ದಿನಸಿ ವಸ್ತುಗಳನ್ನು ಖರೀದಿಸಿ ರಸ್ತೆಯ ಇನ್ನೊಂದು ಬದಿಯಲ್ಲಿ ಇರುವ ಸಂಬಂಧಿಕರ ಬಳಿಗೆ ಹೋಗಲು ಅವರು ರಸ್ತೆ ದಾಟಲು ಮುಂದಾಗಿದ್ದರು. ಈ ವೇಳೆ ಚಿತ್ತೂರು ಕಡೆಯಿಂದ ವಂಡ್ಸೆ ಮಾರ್ಗವಾಗಿ ಅತಿವೇಗದಲ್ಲಿ ಬಂದ ಕಾರು ಶಶಿಕಲಾ ಅವರಿಗೆ ಡಿಕ್ಕಿ ಹೊಡೆದಿದೆ..

ಡಿಕ್ಕಿಯ ರಭಸಕ್ಕೆ ಶಶಿಕಲಾ ಅವರು ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಘಟನಾ ಸ್ಥಳಕ್ಕೆ ಧಾವಿಸಿದ ಕೊಲ್ಲೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *