Breaking
16 Jun 2026, Tue

ಕಾರು ಹಾಗೂ ಪಿಕಪ್ ನಡುವೆ ಡಿಕ್ಕಿ: ಪ್ರಯಾಣಿಕನಿಗೆ ಗಾಯ

ಸುಳ್ಯ: ಆಲೆಟ್ಟಿ ಗ್ರಾಮದ ಪಾಲಡ್ಕ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಮತ್ತು ಪಿಕಪ್‌ ವಾಹನಗಳ ನಡುವೆ ಡಿಕ್ಕಿ ಸಂಭವಿಸಿ ಪ್ರಯಾಣಿಕನೊಬ್ಬ ಗಾಯಗೊಂಡ ಘಟನೆ ನಡೆದಿದೆ.

ಮಡಿಕೇರಿಯಿಂದ ಸುಳ್ಯ ಕಡೆ ಬರುತ್ತಿದ್ದ ಕಾರು ಹಾಗೂ ಸುಳ್ಯ ಕಡೆಯಿಂದ ಮಡಿಕೇರಿ ಕಡೆ ತೆರಳುತ್ತಿದ್ದ ಪಿಕಪ್‌ ವಾಹನಗಳ ನಡುವೆ ಡಿಕ್ಕಿ ಸಂಭವಿಸಿದೆ.

ಡಿಕ್ಕಿಯ ರಭಸಕ್ಕೆ ಪಿಕಪ್‌ ನಲ್ಲಿದ್ದ ಪ್ರಯಾಣಿಕನ ಕೈ ಮುರಿದ ಗಂಭೀರ ಗಾಯಗೊಂಡಿದ್ದಾರೆ. ಗಾಯಗೊಂಡ ಗಾಯಾಳುವನ್ನು ತಕ್ಷಣವೇ ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *