Breaking
19 Apr 2026, Sun

ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು: ಪ್ರಯಾಣಿಕರು ಅಪಾಯದಿಂದ ಪಾರು

ಕಾರ್ಕಳ: ನಿಯಂತ್ರಣ ತಪ್ಪಿದ ಕಾರೊಂದು ಚರಂಡಿಗೆ ಬಿದ್ದ ಘಟನೆ ಹೆಬ್ರಿ- ಕಾರ್ಕಳ ರಾಜ್ಯ ಹೆದ್ದಾರಿ ಮುನಿಯಾಲಿನ ಚಟ್ಕಲ್ ಪಾದೆಯಲ್ಲಿ ನಡೆದಿದೆ.

ಉಜಿರೆ ಕಡೆಯಿಂದ ತೀರ್ಥಹಳ್ಳಿ ಕಡೆ ಸಾಗುತ್ತಿದ್ದ ಇನೋವಾ ಕಾರು ರಿಕ್ಷಾ ಹಾಗೂ ಬೈಕ್‌ ನ್ನು ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದು ಈ ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ಮಹಿಳೆಗೆ ಹಾಗೂ ಮಗುವಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *