Breaking
19 Apr 2026, Sun

ಗಾಂಜಾ ಮಾರಾಟ ಯತ್ನ ಪ್ರಕರಣ: ಆರೋಪಿಗೆ 5 ವರ್ಷ ಜೈಲು ಶಿಕ್ಷೆ

ಬೆಳ್ತಂಗಡಿ: ಗಾಂಜಾ ಮಾರಾಟಕ್ಕೆ ಯತ್ನಿಸಿದ ಆರೋಪಿಗೆ ಮಂಗಳೂರು ಜಿಲ್ಲಾ ವಿಶೇಷ ಪ್ರಧಾನ ಮತ್ತು ಸತ್ರ ನ್ಯಾಯಾಲಯ ಶಿಕ್ಷೆ ವಿಧಿಸಿದೆ.

ಆರೋಪಿಯನ್ನು ಚಾರ್ಮಾಡಿ ನಿವಾಸಿ ಟಿ.ಇ. ಜೋಸೆಫ್ (42) ಎಂದು ಗುರುತಿಸಲಾಗಿದೆ.

ಮಾ. 8 ರಂದು ಬೆಳ್ತಂಗಡಿ ತಾಲೂಕಿನ ಉಜಿರೆ ರಥಬೀದಿಯಲ್ಲಿ ಅಂದಾಜು ರೂ. 50,000 ಮೌಲ್ಯದ 1.500 ಕೆಜಿ ಗಾಂಜಾವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ವೇಳೆ ಪ್ರಕರಣ ಬೆಳಕಿಗೆ ಬಂದಿತ್ತು. ಈ ಕುರಿತು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ದೋಷಿ ಎಂದು ತೀರ್ಪು ನೀಡಿ ಬಳಿಕ ಏಪ್ರಿಲ್ 16ರಂದು ಶಿಕ್ಷೆ ಪ್ರಕಟಿಸಿದೆ.

ಆರೋಪಿಗೆ 5 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ರೂ. 50,000 ದಂಡ ವಿಧಿಸಲಾಗಿದೆ. ದಂಡ ಪಾವತಿಸಲು ವಿಫಲವಾದಲ್ಲಿ ಹೆಚ್ಚುವರಿಯಾಗಿ 2 ತಿಂಗಳ ಕಠಿಣ ಜೈಲು ಶಿಕ್ಷೆ ಅನುಭವಿಸಬೇಕಾಗಿದೆ. 1 ವರ್ಷದ ಕಠಿಣ ಜೈಲು ಶಿಕ್ಷೆಯನ್ನೂ ವಿಧಿಸಲಾಗಿದೆ.

Leave a Reply

Your email address will not be published. Required fields are marked *