Breaking
18 Apr 2026, Sat

ವಿಷ ಸೇವಿಸಿ ಯುವಕ ಆತ್ಮಹತ್ಯೆ

ಕಡಬ: ಯುವಕನೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ಪುಳಿಕುಕ್ಕು ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಸುಳ್ಯ ತಾಲೂಕಿನ ಮಡಪ್ಪಾಡಿ ಗ್ರಾಮದ ಅಂಬೆಕಲ್ಲು ನಿವಾಸಿ ಹೂವಪ್ಪ ಗೌಡ ಎಂಬವರ ಪುತ್ರ ಕಿಶನ್ ಎ ಎಚ್‌ ಎಂದು ಗುರುತಿಸಲಾಗಿದೆ.

ಲೋನ್‌ ಆಫೀಸರ್‌ ಆಗಿ ಕೆಲಸ ಮಾಡುತ್ತಿದ್ದ ಕಿಶನ್‌ ಅವರು ಕಳೆದ ಎರಡು ಮೂರು ತಿಂಗಳುಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ.

ಈ ಕುರಿತು ಮನೆಯವರು ವಿಚಾರಿಸಿದರೂ ಯಾವುದೇ ಸ್ಪಷ್ಟ ಕಾರಣ ತಿಳಿದುಬಂದಿರಲಿಲ್ಲ ಎನ್ನಲಾಗಿದೆ.

Leave a Reply

Your email address will not be published. Required fields are marked *