ಕಾಪು: ಲಾರಿ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಓರ್ವ ಮೃತಪಟ್ಟಿದ್ದು ಇನ್ನಿಬ್ಬರಿಗೆ ಗಂಭೀರವಾಗಿ ಗಾಯಗೊಂಡ ಘಟನೆ ಕಾಪುವಿನ ಪಾಂಗಳ ಕಟ್ಟಿಕೆರೆ ಎಂಬಲ್ಲಿ ನಡೆದಿದೆ.
ಕಾರು ಮಂಗಳೂರಿನಿಂದ ಉಡುಪಿ ಕಡೆಗೆ ಸಂಚರಿಸುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

ಅಪಘಾತದಲ್ಲಿ ಕಾರಿನಲ್ಲಿದ್ದ ಓರ್ವ ಮೃತಪಟ್ಟಿದ್ದು ಇಬ್ಬರಿಗೆ ಗಾಯಗಳಾಗಿದ್ದು ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನಾ ಸ್ಥಳಕ್ಕೆ ಕಾಪು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ಧಾರೆ.








