Breaking
18 Jun 2026, Thu

ಶಿವಮೊಗ್ಗ: ಹಾವು ಕಡಿದ ಪರಿಣಾಮ ಎರಡು ವರ್ಷದ ಮಗು ಮೃತಪಟ್ಟ ದುರ್ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ನಡೆದಿದೆ.

ಮೃತಪಟ್ಟ ಮಗುವನ್ನು ಅಕ್ಷತಾ ಮತ್ತು ಗಣೇಶ್ ದಂಪತಿಯ ಪುತ್ರ ಭವಿನ್ (2) ಎಂದು ಗುರುತಿಸಲಾಗಿದೆ.

ಅಕ್ಷತಾ ಅವರು ಸಾಗರದಲ್ಲಿರುವ ತಮ್ಮ ತವರು ಮನೆಗೆ ಬಂದಿದ್ದರು. ಮಗು ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದಾಗ ವಿಷಕಾರಿ ಹಾವು ಕಚ್ಚಿದೆ. ಮಗು ಜೋರಾಗಿ ಅಳತೊಡಗಿದ ಹಿನ್ನೆಲೆಯಲ್ಲಿ ಪೋಷಕರು ಸ್ಥಳಕ್ಕೆ ಬಂದು ಪರಿಶೀಲಿಸಿದಾಗ ಹಾವು ಕಡಿತದ ಗುರುತುಗಳು ಪತ್ತೆಯಾಗಿವೆ.

ತಕ್ಷಣ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಭವಿನ್ ಮೃತಪಟ್ಟಿದ್ದಾನೆ.

ಈ ಕುರಿತು ಸಾಗರ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *