Breaking
18 Jun 2026, Thu

ಮೂರ್ಜೆ ಬಳಿ ಸರಣಿ ಅಪಘಾತ: ಸವಾರರು ಸಣ್ಣ ಪುಟ್ಟ ಗಾಯಗಳಿಂದ ಅಪಾಯದಿಂದ ಪಾರು

ಬಂಟ್ವಾಳ: ತಾಲೂಕಿನ ಪುಂಜಾಲಕಟ್ಟೆ ಸಮೀಪದ ಮೂರ್ಜೆ ಬಳಿ ಸರಣಿ ಅಪಘಾತ ಸಂಭವಿಸಿದ ಘಟನೆ ನಡೆದಿದೆ.

ಮೂರ್ಜೆ ಕಡೆಯಿಂದ ಬರುತ್ತಿದ್ದ ಗೂಡ್ಸ್ ರಿಕ್ಷಾಕ್ಕೆ ಮಡಂತ್ಯಾರು ಕಡೆಯಿಂದ ಬರುತ್ತಿದ್ದ ಬಸ್ ಡಿಕ್ಕಿಯಾಗಿದೆ. ಇದೇ ವೇಳೆ ಬಿ.ಸಿ.ರೋಡು ಕಡೆಯಿಂದ ಬರುತ್ತಿದ್ದ ದ್ವಿಚಕ್ರ ವಾಹನ ರಿಕ್ಷಾಕ್ಕೆ ಡಿಕ್ಕಿ ಹೊಡೆದಿದೆ.

ಅಪಘಾತದಲ್ಲಿ ರಿಕ್ಷಾ ಹಾಗೂ ದ್ವಿಚಕ್ರ ವಾಹನಗಳು ಪಲ್ಟಿಯಾಗಿದ್ದು, ದ್ವಿಚಕ್ರ ವಾಹನ ಸವಾರರು ಹಾಗೂ ರಿಕ್ಷಾ ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್‌ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *