Breaking
19 Sep 2026, Sat

ಆಟೋ ರಿಕ್ಷಾ ಹಾಗೂ ಖಾಸಗಿ ಬಸ್ ಮುಖಾಮುಖಿ ಡಿಕ್ಕಿ: ಚಾಲಕ ಸೇರಿದಂತೆ ಮೂವರಿಗೆ ಗಾಯ

ಮಂಗಳೂರು: ವಾಮಂಜೂರು ಬಳಿಯ ಕೇತಿಕಲ್ ನಲ್ಲಿ ಆಟೋ ಹಾಗೂ ಖಾಸಗಿ ಬಸ್‌ ಮುಖಾಮುಖಿ ಡಿಕ್ಕಿ ಸಂಭವಿಸಿ ಆಟೋರಿಕ್ಷಾ ಚಾಲಕ ಸೇರಿದಂತೆ ಮೂವರು ಗಾಯಗೊಂಡ ಘಟನೆ ಏ. 17 ರಂದು ನಡೆದಿದೆ.

ಮಂಗಳೂರಿನಿಂದ ಮೂಡುಬಿದಿರೆ ಕಡೆಗೆ ಸಾಗುತ್ತಿದ್ದ ಖಾಸಗಿ ಎಕ್ಸ್‌ಪ್ರೆಸ್ ಬಸ್ ಕೇತಿಕಲ್ ಬಳಿ ಬರುತ್ತಿದ್ದಂತೆ ಎದುರಿನಿಂದ ಬರುತ್ತಿದ್ದ ಆಟೋರಿಕ್ಷಾಗೆ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ಆಟೋರಿಕ್ಷಾದ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಚಾಲಕನಿಗೆ ಗಂಭೀರ ಗಾಯಗಳಾಗಿದ್ದು, ಆಟೋದಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಪ್ರಯಾಣಿಕರಿಗೂ ಗಾಯಗಳಾಗಿವೆ. ಬಸ್ಸಿನಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

ಗಾಯಗೊಂಡ ಗಾಯಾಳುಗಳನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಘಟನಾ ಸ್ಥಳಕ್ಕೆ ಮಂಗಳೂರು ನಗರ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *