ಬಂಟ್ವಾಳ: ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಬಂಟ್ವಾಳ ಪೆರುವಾಯಿ ನಿವಾಸಿ ಅಬ್ಬಾಸ್ ಎಂದು ಗುರುತಿಸಲಾಗಿದೆ.

ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಏ. 16 ರಂದು ವಿದೇಶದಿಂದ ಹಿಂತಿರುಗುವಾಗ ಇಮಿಗ್ರೇಶನ್ ವಿಭಾಗದ ಸಹಕಾರದೊಂದಿಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ವಿಟ್ಲ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇದೀಗ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ಆರೋಪಿಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.


