Breaking
19 Jun 2026, Fri

ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಬಗ್ಗೆ ಅಧಿಕಾರಿಗಳ ಒತ್ತಡಕ್ಕೆ ಅಕ್ಷೆಪಿಸಿದ್ದಕ್ಕೆ ಪ್ರಭಾಕರ ಪ್ರಭು ವಿರುದ್ಧ ಅಧಿಕಾರಿಗಳು ಸಲ್ಲಿಸಿದ ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ

ಬಂಟ್ವಾಳ: ಕರ್ನಾಟಕ ರಾಜ್ಯ ಸರಕಾರದ ವತಿಯಿಂದ 2025 ಸೆಪ್ಟೆಂಬರ್ ತಿಂಗಳಲ್ಲಿ ಹಮ್ಮಿಕೊಳ್ಳಲಾಗಿದ್ದ ನಾಗರೀಕರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಪ್ರಗತಿ ಬಗ್ಗೆ ಗ್ರಾಮ ಪಂಚಾಯತ್ ಸಿಬ್ಬಂದಿಗಳಿಗೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಿ. ಇ. ಓ ರವರು ಹೈ ಕೋರ್ಟ್ ಆದೇಶ ಮೀರಿ ಜ್ಯಾಪನ ಪತ್ರ ಹೋರಡಿಸಿದಕ್ಕೆ ಅಕ್ಸೆಪ ಸಲ್ಲಿಸಿ ಬಂಟ್ವಾಳ ತಾಲೂಕು ಪಂಚಾಯತ್ ಮಾಜಿ ಸದಸ್ಯ ಪ್ರಭಾಕರ ಪ್ರಭು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯವರಿಗೆ ಪತ್ರ ಬರೆದು ಅಕ್ಷೆಪ ಸಲ್ಲಿಸಿ ಮನವಿ ಸಲ್ಲಿಸಿದ್ದರು.

ಈ ಸಮೀಕ್ಷೆಯಲ್ಲಿ ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ಭಾಗವಹಿಸಬಹುದು ಹಾಗೂ ಸಮೀಕ್ಷೆಯಲ್ಲಿ ನಾಗರೀಕರಿಗೆ ಆಸಕ್ತಿ ಇಲ್ಲಾವಾದಲ್ಲಿ ಒತ್ತಡ ಹೇರುವಂತಿಲ್ಲ ಎಂದೂ ಹೈಕೋರ್ಟ್ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಿಇಓ ರವರಿಗೆ ಬಂಟ್ವಾಳ ತಾಲೂಕು ಪಂಚಾಯತ್ ಮಾಜಿ ಸದಸ್ಯ ಪ್ರಭಾಕರ ಪ್ರಭುರವರು ಗ್ರಾಮ ಪಂಚಾಯತ್ ಸಿಬ್ಬಂದಿಗಳಿಗೆ ಒತ್ತಡ ಹಾಕೋದ್ ಬೇಡ ಎಂದೂ ಮನವಿ ಮಾಡಿ ಪತ್ರ ಬರೆದಿದ್ದರು.

ಈ ಪತ್ರವನ್ನು ಆಧಾರಿಸಿ ಮಾಜಿ ಸದಸ್ಯರು ಲೇಟರ್ ಹೆಡ್ ಲ್ಲಿ ಬಂಟ್ವಾಳ ತಾಲೂಕು ಪಂಚಾಯತ್ ಹೆಸರು ಹಾಕುವಂತಿಲ್ಲ ಎಂಬಾ ಕಾರಣಕ್ಕೆ ಎಂದೂ ಬಂಟ್ವಾಳ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಸ್ಟೇಷನ್ ಲ್ಲಿ ನೀಡಿದ ದೂರಿನ ಮೇರೆಗೆ ಬಂಟ್ವಾಳ ಪೊಲೀಸರು ಪ್ರಭಾಕರ ಪ್ರಭು ಮೇಲೆ ಅಪರಾಧ ಸಂಖ್ಯೆ 0147/2025 ರಂತೆ ಭಾರತೀಯ ನಾಗರೀಕ ನ್ಯಾಯ ಸಂಹಿತೆ ಬಿ ಏನ್ ಎಸ್ 2023 (U/s)319(2), 336(2) ಪ್ರಕರಣ ದಾಖಲಿಸಿದ್ದರು, ಈ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಪ್ರಭಾಕರ ಪ್ರಭು ರವರು ಹೈ ಕೋರ್ಟ್ ಲ್ಲಿ ತಡೆಯಾಜ್ಞೆ ಕೋರಿ ರಿಟ್ ಪಿಟಿಷನ್ ಅರ್ಜಿ ಸಲ್ಲಿಸಿದ್ದರು. ಹೈ ಕೋರ್ಟ್ ಪೊಲೀಸ್ ಠಾಣೆಯಲ್ಲಿ ಪ್ರಭಾಕರ ಪ್ರಭು ಮೇಲೆ ದಾಖಲಾಗಿದ್ದ ಪ್ರಕರಣಕ್ಕೆ ತಡೆಯಾಜ್ಞೆ ನೀಡಿ ಪ್ರಕರಣವನ್ನು ಮುಂದಕ್ಕೆ ಹಾಕಿದೆ. ಪ್ರಭಾಕರ ಪ್ರಭು ಪರವಾಗಿ ಹೈಕೋರ್ಟ್ ನ್ಯಾಯವಾದಿ ರೋಹಿತ್ ಬಿ. ಜೆ.ವಾದಿಸಿದ್ದರು.

Leave a Reply

Your email address will not be published. Required fields are marked *