Breaking
20 Jun 2026, Sat

ಹಾಲು ಸಂಸ್ಕರಣಾ ಘಟಕದಲ್ಲಿ ಬೆಂಕಿ

ಉಡುಪಿ: ಮಣಿಪಾಲದ ಈಶ್ವರ ನಗರದಲ್ಲಿರುವ ಕೆಎಂಎಫ್ ಹಳೆಯ ಹಾಲು ಸಂಸ್ಕರಣಾ ಘಟಕದಲ್ಲಿ ಏ. 20 ರಂದು ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ.

ಏ. 20 ರಂದು ಬೆಳಿಗ್ಗೆ 11 ಗಂಟೆ ಸುಮಾರಿಗೆ ವೆಲ್ಡಿಂಗ್‌ ಕೆಲಸ ಮಾಡುತ್ತಿದ್ದಾಗ ಬೆಂಕಿ ಕಾಣಿಸಿಕೊಂಡಿದ್ದು ಕ್ಷಣಾರ್ಧದಲ್ಲಿ ಬೆಂಕಿಯ ಕಿಡಿಗಳು ಎಣ್ಣೆಗೆ ತಗುಲಿ ಘಟಕದಲ್ಲಿದ್ದ ಬಾಯ್ಲರ್‌ಗೂ ಹರಡಿದೆ. ತಕ್ಷಣ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಗಿದ್ದು ಸ್ಥಳಕ್ಕೆ ಧಾವಿಸಿದ ಸಿಬ್ಬಂದಿಗಳು ಬೆಂಕಿಯನ್ನು ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾರೆ.

ಘಟನೆಯಲ್ಲಿ ಘಟಕಕ್ಕೆ ಹಾನಿಯಾಗಿದೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *