Breaking
20 Jun 2026, Sat

ನಾಲ್ಕು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಮೂಡಬಿದಿರೆ: ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ಕಳೆದ ನಾಲ್ಕು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನುಅಬ್ದುಲ್ ಬಶೀರ್ ಅಲಿಯಾಸ್ ಅರ್ಗ ಬಶೀರ್ (50) ಎಂದು ಗುರುತಿಸಲಾಗಿದೆ.

ಆರೋಪಿಯ ವಿರುದ್ಧ ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಗಳು ಸೇರಿದಂತೆ ವಿವಿಧ ಪೊಲೀಸ್ ಠಾಣೆಗಳಲ್ಲಿ ಹಲವು ಪ್ರಕರಣಗಳು ದಾಖಲಾಗಿದ್ದವು. ಈತನ ವಿರುದ್ಧ ನ್ಯಾಯಾಲಯವು ದಸ್ತಗಿರಿ ವಾರಂಟ್ ಹೊರಡಿಸಿತ್ತು. ಬಳಿಕ ಆರೋಪಿ ಬಿ.ಸಿ. ರೋಡ್ ಸಮೀಪದ ಪರ್ಲಿಯಾ ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದಾನೆ ಎಂಬ ಖಚಿತ ಮಾಹಿತಿ ಪಡೆದ ಪೊಲೀಸರು ಏಪ್ರಿಲ್ 18 ರಂದು ಆತನನ್ನು ವಶಕ್ಕೆ ಪಡೆದಿದ್ದಾರೆ.

Leave a Reply

Your email address will not be published. Required fields are marked *