Breaking
20 Jun 2026, Sat

ಎಂಡಿಎಂಎ ಮಾರಾಟ : ಇಬ್ಬರು ಆರೋಪಿಗಳ ಬಂಧನ

ಮಂಗಳೂರು: ದ್ವಿಚಕ್ರ ವಾಹನದಲ್ಲಿ ಎಂಡಿಎಂಎ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಮಂಗಳೂರಿನ ಪೆರ್ಮಾನ್ನೂರು, ಪಿಲಾರು ಹೊಸಗದ್ದೆ ಮನೆ ನಿವಾಸಿ ಪರ್ವೇಜ್ ಅಲಿಯಾಸ್ ದಾವೂದ್ ಪರ್ವೇಜ್ (40), ನಜರತ್ ಅಲಿ (37) ಎಂದು ಗುರುತಿಸಲಾಗಿದೆ.

ಮಂಗಳೂರು ನಗರದ ಜೆಪ್ಪಿನಮೊಗರು ಪ್ರದೇಶದಲ್ಲಿ ದ್ವಿಚಕ್ರ ವಾಹನದಲ್ಲಿ ಎಂಡಿಎಂಎ ಸಾಗಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಕಂಕನಾಡಿ ನಗರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

ಆರೋಪಿಗಳಿಂದ 46,50,000 ರೂ. ಮೌಲ್ಯದ 465.8 ಗ್ರಾಂ ತೂಕದ ಎಂಡಿಎಂಎ ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ.

ಈ ಕುರಿತು ಆರೋಪಿಗಳ ವಿರುದ್ದ ಪ್ರಕರಣ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *