Breaking
5 Aug 2026, Wed

ಕಲ್ಲಾಪು ಬಳಿ ಲಾರಿ ಹಾಗೂ ದ್ವಿಚಕ್ರ ವಾಹನ ಡಿಕ್ಕಿ: ಸವಾರ ಸಾವು, ಮತ್ತೊಬ್ಬರಿಗೆ ಗಾಯ

ಉಡುಪಿ: ಕಟಪಾಡಿ ಕಲ್ಲಾಪು ಬಳಿ ದ್ವಿಚಕ್ರ ವಾಹನ ಹಾಗೂ ಲಾರಿಯ ನಡುವೆ ಸಂಭವಿಸಿದ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟ ಘಟನೆ ನಡೆದಿದೆ.

ಮೃತಪಟ್ಟವರನ್ನು ಬಾಗಲಕೋಟೆ ಹುನಗುಂದದ, ಪ್ರಸ್ತುತ ಕಟಪಾಡಿ ಸರಕಾರಿ ಗುಡ್ಡೆ ನಿವಾಸಿ ಭೀಮಪ್ಪ ಹುನ್ನಳ್ಳಿ ಎಂದು ಗುರುತಿಸಲಾಗಿದೆ.

ದ್ವಿಚಕ್ರ ವಾಹನ ಮತ್ತು ಲಾರಿ ಕಾಪು ಕಡೆಗೆ ಸಾಗುತ್ತಿದ್ದ ವೇಳೆ ಕಲ್ಲಾಪು ಡೆವಿಯೇಷನ್ ಬಳಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು ಸಹ ಸವಾರ ಕಟಪಾಡಿ ನಾಯ್ಕರ ತೋಟದ ಸಾಗರ್‌ ಶೆಣೈ ಗಾಯಗೊಂಡಿದ್ದಾರೆ. ಗಾಯಾಳುವನ್ನು ತಕ್ಷಣವೇ ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಲಾರಿ ಚಾಲಕನ ಅಜಾಗರೂಕತೆಯೇ ಅಪಘಾತಕ್ಕೆ ಕಾರಣ ಎಂದು ತಿಳಿದುಬಂದಿದೆ.

ಈ ಕುರಿತು ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *