ಮಂಗಳೂರು: ಲಕ್ಷಾಂತರ ವಿದ್ಯಾರ್ಥಿಗಳು ಕಾಯುತ್ತಿದ್ದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ–1ರ ಫಲಿತಾಂಶ ಇಂದು (ಏ. 23) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.

ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಅಧಿಕೃತವಾಗಿ ಫಲಿತಾಂಶ ಪ್ರಕಟಿಸಲಿದ್ದಾರೆ.

ಈ ವರ್ಷ ಕರ್ನಾಟಕದಲ್ಲಿ ಒಟ್ಟು 2,870 ಕೇಂದ್ರಗಳಲ್ಲಿ ಪರೀಕ್ಷೆ ನಡೆದಿದ್ದು, ಇದರಲ್ಲಿ ಒಟ್ಟು 8,65,988 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ.

ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು karresults.nic.in ಅಥವಾ kseab.karnataka.gov.in ವೆಬ್‌ಸೈಟ್‌ಗಳಲ್ಲಿ ನೋಂದಣಿ ಸಂಖ್ಯೆ (Registration Number) ಮತ್ತು ಜನ್ಮ ದಿನಾಂಕವನ್ನು ನಮೂದಿಸಿ ವೀಕ್ಷಿಸಬಹುದು.
ಇದಲ್ಲದೆ, ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026 ಡಿಜಿಲಾಕರ್ (DigiLocker) ಮೂಲಕವೂ ಲಭ್ಯವಾಗಲಿದೆ.


