Breaking
19 Sep 2026, Sat

ಎಸ್‌ಎಸ್‌ಎಲ್‌ಸಿ: 620 ಅಂಕ ಪಡೆದ ಪೂರ್ವಿ ಎ. ಭಾರಧ್ವಜ್‌ಗೆ ತಾಲೂಕು ಪ್ರಥಮ, ರಾಜ್ಯಕ್ಕೆ 6ನೇ ಸ್ಥಾನ

ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

ಬಂಟ್ವಾಳ: 2025–26ನೇ ಶೈಕ್ಷಣಿಕ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಮಾಣಿ–ಪೆರಾಜೆಯ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ ಶೇ.100 ಫಲಿತಾಂಶ ದಾಖಲಿಸಿದೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಒಟ್ಟು 79 ವಿದ್ಯಾರ್ಥಿಗಳು ಹಾಜರಾಗಿದ್ದು, ಇವರಲ್ಲಿ 48 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್‌ನಲ್ಲಿ ಉತ್ತೀರ್ಣರಾಗಿದ್ದಾರೆ. ಉಳಿದ ಎಲ್ಲಾ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.

ವಿದ್ಯಾರ್ಥಿನಿ ಪೂರ್ವಿ ಎ. ಭಾರಧ್ವಜ್ 620 ಅಂಕ (99.2%) ಗಳಿಸಿ ಬಂಟ್ವಾಳ ತಾಲೂಕಿಗೆ ಪ್ರಥಮ ಸ್ಥಾನ ಹಾಗೂ ರಾಜ್ಯಕ್ಕೆ 6ನೇ ಸ್ಥಾನ ಪಡೆದುಕೊಂಡಿದ್ದಾರೆ. ಸಂಜನಾ ಎಸ್. ಭಟ್ 614 ಅಂಕ (98.24%) ಪಡೆದು ದ್ವಿತೀಯ ಸ್ಥಾನ ಹಾಗೂ ಅಂಶಿಕ ಎಸ್. ಕೆ. 613 ಅಂಕ (98.08%) ಗಳಿಸಿ ತೃತೀಯ ಸ್ಥಾನ ಪಡೆದಿದ್ದಾರೆ.

Leave a Reply

Your email address will not be published. Required fields are marked *