Breaking
5 Aug 2026, Wed

ಎಸ್‌ಎಸ್‌ಎಲ್‌ಸಿ ಯಲ್ಲಿ ಬಂಟ್ವಾಳದ ಎಸ್.ವಿ.ಎಸ್ ಕನ್ನಡ ಮಾಧ್ಯಮ ಪ್ರೌಢಶಾಲೆಗೆ ಶೇ.100 ಫಲಿತಾಂಶ

ಬಂಟ್ವಾಳ: 2025–26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಬಂಟ್ವಾಳದ ಎಸ್.ವಿ.ಎಸ್ ದೇವಳ ಕನ್ನಡ ಮಾಧ್ಯಮ ಪ್ರೌಢಶಾಲೆ ಶೇ.100 ಫಲಿತಾಂಶ ದಾಖಲಿಸಿದೆ.

ಶಾಲೆಯ ಒಟ್ಟು 50 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಎಲ್ಲರೂ ಉತ್ತೀರ್ಣರಾಗಿದ್ದಾರೆ.

ಅಧಿತಿ ಕೆ. ಪೂಜಾರಿ 588 ಅಂಕಗಳನ್ನು ಗಳಿಸಿ ಶಾಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಫಾತಿಮಾತ್ ಸನಾ 587 ಅಂಕಗಳನ್ನು ಪಡೆದು ದ್ವಿತೀಯ ಸ್ಥಾನ ಗಳಿಸಿದ್ದಾರೆ.

ಒಟ್ಟು 14 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದು, 33 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಹಾಗೂ 3 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.

ಶಾಲೆಯು ‘ಎ’ ಗ್ರೇಡ್‌ ಫಲಿತಾಂಶವನ್ನು ದಾಖಲಿಸಿದೆ. ಉತ್ತಮ ಸಾಧನೆಗೈದ ವಿದ್ಯಾರ್ಥಿಗಳಿಗೆ ಶಾಲಾ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು, ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.

Leave a Reply

Your email address will not be published. Required fields are marked *