Breaking
24 Apr 2026, Fri

ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವು

ಪುತ್ತೂರು: ಬೈಕ್‌ ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವಕ ಚಿಕಿತ್ಸೆ ಫಲಕಾರಿಯಾಗದೇ ಮೃತಪ ಟ್ಟ ಘಟನೆ ನಡೆದಿದೆ.

ಮೃತಪಟ್ಟ ಯುವಕನನ್ನು ರವೀಂದ್ರ ರೈ ಮುರದಮೇಲುರವರ ಪುತ್ರ ಲಿಖಿತ್ ರೈ ಎಂದು ಗುರುತಿಸಲಾಗಿದೆ.

ಏ. 22ರಂದು ಲಿಖಿತ್ ಅವರು ಮೋಟಾರ್ ಸೈಕಲ್‌ನಲ್ಲಿ ಉಪ್ಪಿನಂಗಡಿ–ಕೊಯಿಲಾ ಸಾರ್ವಜನಿಕ ರಸ್ತೆಯಲ್ಲಿ ಸಂಚರಿಸುತ್ತಿದ್ದ ವೇಳೆ ಹಿರೇಬಂಡಾಡಿ ಶಾಖೆಪುರ ಸಮೀಪ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಗುಂಡಿಗೆ ಬಿದ್ದಿದೆ.

ಅಪಘಾತದಲ್ಲಿ ಗಂಭೀರ ಗಾಯಗೊಂಡ ಲಿಖಿತ್‌ ಅವರನ್ನು ತಕ್ಷಣವೇ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಈ ಕುರಿತು ಪುತ್ತೂರು ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *