Breaking
24 Apr 2026, Fri

ಷೇರು ವ್ಯವಹಾರದಲ್ಲಿ ನಷ್ಟ: ಮನನೊಂದು ಯುವಕ ಆತ್ಮಹತ್ಯೆ

ಕಾರವಾರ: ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಹರ್ಷವರ್ಧನ್‌(22) ಎಂದು ಗುರುತಿಸಲಾಗಿದೆ.

ಮೊಬೈಲ್ ಮೂಲಕ ಸ್ಟಾಕ್ ಎಕ್ಸ್‌ಚೇಂಜ್‌ನಲ್ಲಿ ಟ್ರೇಡಿಂಗ್ ಮಾಡುತ್ತಿದ್ದ ಹರ್ಷವರ್ಧನ್, ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ಲಕ್ಷಾಂತರ ರೂಪಾಯಿ ನಷ್ಟ ಅನುಭವಿಸಿದ್ದಾನೆ. ಇದರಿಂದ ಮನನೊಂದು ಮನೆಯಲ್ಲೇ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಈ ಕುರಿತು ಸಿದ್ದಾಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು ತನಿಖೆ ಮುಂದುವರೆದಿದೆ.

Leave a Reply

Your email address will not be published. Required fields are marked *