ಉಡುಪಿ: ಮಾವಿನ ಹಣ್ಣು ಕೊಯ್ಯುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿಯ ಹಿಂಭಾಗದಲ್ಲಿ ನಡೆದಿದೆ.

ಮೃತಪಟ್ಟವರನ್ನು ಅಲೆವೂರು ನಿವಾಸಿ ಸದಾನಂದ ದೇವಾಡಿಗ (55) ಎಂದು ಗುರುತಿಸಲಾಗಿದೆ.

ಗ್ರಾಮ ಸಹಾಯಕರಾಗಿ ಕೆಲಸ ಮಾಡುತ್ತಿದ್ದ ಸದಾನಂದ ಅವರು ಇಂದು (ಏ. 24) ಬೆಳಿಗ್ಗೆ ಮಾವಿನ ಹಣ್ಣು ಕೊಯ್ಯಲು ಹೋದ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಂತಿ ಸ್ಪರ್ಶಿಸಿ ಮೃತಪಟ್ಟಿದ್ದಾರೆ.
ಈ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



