ಬಂಟ್ವಾಳ: ಶ್ರೀ ಸದಾಶಿವ ದೇವಸ್ಥಾನ ಈಶ್ವರ ಮಂಗಳದ ಸಜೀಪ ಮೂಡ ಶ್ರೀ ಕ್ಷೇತ್ರದಲ್ಲಿ ಪ್ರಾಯಶ್ಚಿತ್ತ ಶಾಂತಿ ಹೋಮವು ಶ್ರದ್ಧಾ ಭಕ್ತಿಯಿಂದ ನಡೆಯಿತು.

ಈ ಧಾರ್ಮಿಕ ವಿಧಿವಿಧಾನವನ್ನು ಸಜೀಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್ ನೇತೃತ್ವದಲ್ಲಿ ಶ್ರದ್ಧಾ ಭಕ್ತಿಯಿಂದ ನೆರವೇರಿಸಿದರು.

ಈ ಸಂದರ್ಭದಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೇವರ ಕೃಪೆಗೆ ಪಾತ್ರರಾಗಿ ಪ್ರಸಾದವನ್ನು ಸ್ವೀಕರಿಸಿದರು.



