Breaking
25 Apr 2026, Sat

ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಕುಂದಾಪುರ: ಹೆಲ್ಮೆಟ್‌ ಧರಿಸಿ ಕುಂದಾಪುರ ತಾಲೂಕಿನ ಅಜ್ರಿ ಗ್ರಾಮದ ಉಮಾಮಹೇಶ್ವರ ದೇವಸ್ಥಾನದಲ್ಲಿ ಕಳ್ಳತನ ನಡೆಸಿದ ಆರೋಪಿಗಳನ್ನು ಬಾಗಲಕೋಟೆ ಜಿಲ್ಲೆಯ ಇಳಕಲ್‌ನಿಂದ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಕುಂದಾಪುರ ತಾಲೂಕಿನ ಕಮಲಶಿಲೆಯ ಮಠದಮನೆ ನಿವಾಸಿ ಸಂದೀಪ ಆಚಾರಿ (28) ಹಾಗೂ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಬನಹಟ್ಟಿ ನಿವಾಸಿ ಮುತ್ತಪ್ಪ ಶರಣಪ್ಪ ವಾಲೀಕಾರ (40) ಎಂದು ಗುರುತಿಸಲಾಗಿದೆ.

ಏಪ್ರಿಲ್ 20ರಂದು ಅಪರಿಚಿತ ವ್ಯಕ್ತಿಯೊಬ್ಬರು ಹೆಲ್ಮೆಟ್ ಧರಿಸಿ ದೇವಾಲಯದ ಹೊರ ಆವರಣಕ್ಕೆ ಬಂದು, ಕಾಣಿಕೆ ಹುಂಡಿಯನ್ನು ಕದ್ದು ಪರಾರಿಯಾಗಿದ್ದರು. ಈ ಸಂಬಂಧ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಬಳಿಕ ತನಿಖೆ ಕೈಗೊಂಡ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆರೋಪಿಗಳಿಂದ ಅಪರಾಧಕ್ಕೆ ಬಳಸಲಾದ ಮೋಟಾರ್ ಸೈಕಲ್, ಮೂರು ಮೊಬೈಲ್ ಫೋನ್‌ಗಳು ಮತ್ತು ಉಮಾಮಹೇಶ್ವರ ದೇವಸ್ಥಾನದಿಂದ ಕದ್ದ ಕಾಣಿಕೆ ಹುಂಡಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಬಂಧಿತ ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

Leave a Reply

Your email address will not be published. Required fields are marked *