Breaking
19 Jun 2026, Fri

ವಾಮದಪದವು ಸರಕಾರಿ ಪ್ರೌಢಶಾಲೆಗೆ 98.6% ಫಲಿತಾಂಶ: 601 ಅಂಕ ಪಡೆದು ಶಾಲೆಗೆ ಟಾಪರ್ ಆದ ತೇಜಸ್ ಬಲ್ಲಾಳ್

ಬಂಟ್ವಾಳ: ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ವಾಮದಪದವು ಸರಕಾರಿ‌ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗವು ಶೇ. 98.6 ಫಲಿತಾಂಶ ದಾಖಲಿಸಿದೆ.

ಪರೀಕ್ಷೆಗೆ ಹಾಜರಾದ 74 ವಿದ್ಯಾರ್ಥಿಗಳಲ್ಲಿ 73 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು,
15 ವಿದ್ಯಾರ್ಥಿಗಳು ವಿಶಿಷ್ಠ ಶ್ರೇಣಿ, 39 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.

601/625 ಅಂಕ ಪಡೆದು ತೇಜಸ್ ಬಲ್ಲಾಳ್ ಶಾಲೆಯ ಟಾಪರ್ ಆಗಿದ್ದು, ಚಶ್ಮಿ 599, ಸಮೀಕ್ಷ 580, ಹನ್ಸಿಕಾ ಪೂಜಾರಿ 567, ಧನ್ಯಶ್ರೀ 561 ಅಂಕ ಪಡೆಯುವ ಮೂಲಕ ಉತ್ತಮ ಸಾಧನೆ ತೋರಿದ್ದಾರೆ.

ಎಲ್ಲಾ ವಿದ್ಯಾರ್ಥಿಗಳಿಗೆ ಶಾಲಾಭಿವೃದ್ಧಿ ಸಮಿತಿ ಮತ್ತು ಶಿಕ್ಷಕ ವೃಂದ ಅಭಿನಂದನೆ ಸಲ್ಲಿಸಿದ್ದಾರೆ.

Leave a Reply

Your email address will not be published. Required fields are marked *