Breaking
19 Jun 2026, Fri

ರೈಲಿನಲ್ಲಿ ಗರ್ಭಿಣಿ ಮಹಿಳೆಗೆ ಹೆರಿಗೆ ಮಾಡಿಸಿದ ವೈದ್ಯರು ಹಾಗೂ ಸಹಪ್ರಯಾಣಿಕರು

ಬಂಟ್ವಾಳ: ಚಲಿಸುತ್ತಿದ್ದ ರೈಲಿನಲ್ಲೇ ಮಹಿಳೆಯೊಬ್ಬರಿಗೆ ಹೆರಿಗೆ ನೋವು ಕಾಣಿಸಿಕೊಂಡು, ಸಹಪ್ರಯಾಣಿಕರ ನೆರವಿನಿಂದ ಸಹಜ ಹೆರಿಗೆ ನಡೆದ ಘಟನೆ ಬಿ.ಸಿ.ರೋಡ್‌ನಲ್ಲಿ ನಡೆದಿದೆ.

ಮಂಗಳೂರು ಜಂಕ್ಷನ್‌ನಿಂದ ಹೊರಟ ರೈಲಿನಲ್ಲಿ ಮೈಸೂರು ಮೂಲದ ತುಂಬು ಗರ್ಭಿಣಿಗೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ರೈಲು ಬಿ.ಸಿ.ರೋಡ್ ತಲುಪುವ ವೇಳೆಗೆ ಗರ್ಭಿಣಿಗೆ ತೀವ್ರ ರಕ್ತಸ್ರಾವವೂ ಆರಂಭವಾಗಿತ್ತು. ಪರಿಸ್ಥಿತಿ ಗಂಭೀರವಾಗುತ್ತಿದ್ದಂತೆ ತಕ್ಷಣ ರೈಲು ಸಂಚಾರವನ್ನು ನಿಲ್ಲಿಸಿ, ಮಂಗಳೂರಿನಿಂದ ರೈಲು ಹತ್ತಿದ್ದ ಈ ಮಹಿಳೆಗೆ ಮಧ್ಯದಲ್ಲೇ ನೋವು ಹೆಚ್ಚಾಗಿದ್ದು, ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ಮುಸ್ಲಿಂ ಸಮುದಾಯದ ಮಹಿಳೆಯರು ತಕ್ಷಣ ಸಹಾಯಕ್ಕೆ ಮುಂದಾದರು. ಅವರು ಪ್ರಾಥಮಿಕ ಉಪಚಾರ ನೀಡುವುದರ ಜೊತೆಗೆ ರೈಲ್ವೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ಸುದ್ದಿ ತಿಳಿದ ರೈಲ್ವೆ ಇಲಾಖೆ ತಕ್ಷಣ ಸ್ಪಂದಿಸಿ, ಬಿ.ಸಿ.ರೋಡ್ ನಿಲ್ದಾಣದಲ್ಲಿ ರೈಲನ್ನು ನಿಲ್ಲಿಸಿ ಸ್ಥಳೀಯ ವೈದ್ಯರ ತಂಡವನ್ನು ಕರೆಸಿ ರೈಲು ಬೋಗಿಯಲ್ಲೇ ಅಗತ್ಯ ಸೌಲಭ್ಯಗಳನ್ನು ಒದಗಿಸಿ ವೈದ್ಯರು ಯಶಸ್ವಿಯಾಗಿ ಹೆರಿಗೆಯನ್ನು ನೆರವೇರಿಸಿದರು.

ನಂತರ ತಾಯಿ ಮತ್ತು ಮಗುವನ್ನು ಆಂಬ್ಯುಲೆನ್ಸ್ ಮೂಲಕ ಬಿ.ಸಿ.ರೋಡ್‌ನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಅವರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *