ಬೆಳ್ತಂಗಡಿ: ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಬಸ್ ಪಲ್ಟಿಯಾಗಿ 20 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡ ಘಟನೆ ಚಾರ್ಮಾಡಿ ಘಾಟ್‌ನ ನಾಲ್ಕನೇ ತಿರುವಿನಲ್ಲಿ ನಡೆದಿದೆ.

ಗಾಯಗೊಂಡವರನ್ನು ಆಂಧ್ರಪ್ರದೇಶ ಮತ್ತು ತುಮಕೂರಿನ ಪಾವಗಡ ನಿವಾಸಿಗಳು ಎಂದು ಗುರುತಿಸಲಾಗಿದೆ.

ಉಜಿರೆಯಿಂದ ಕೊಟ್ಟಿಗೆಹಾರ ಕಡೆಗೆ ತೆರಳುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ 20 ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದ್ದು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆ ಮತ್ತು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.
ಘಟನಾ ಸ್ಥಳಕ್ಕೆ ಬೆಳ್ತಂಗಡಿ ಸಂಚಾರ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.



