Breaking
19 Sep 2026, Sat

ಮನೆ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಕಾರ್ಕಳ: ಕಳ್ಳರು ಮನೆಗೆ ನುಗ್ಗಿ ಚಿನ್ನಾಭರಣ ಕಳವು ಮಾಡಿದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಉಡುಪಿಯ ಬೈರಂಪಳ್ಳಿ ಗ್ರಾಮದ ಆನಂದ ಕುಲಾಲ್‌ (40), ಕೈಕಂಬ ಅಜೆಕಾರು ಮರ್ಣೆ ಗ್ರಾಮದ ಜಯರಾಮ ಆಚಾರ್ಯ (54) ಎಂದು ಗುರುತಿಸಲಾಗಿದೆ.

ಎ. 23ರಂದು ಶಂಕರ ಕುಲಾಲ್ ಅವರು ಮನೆಗೆ ಬೀಗ ಹಾಕಿ ಕೆಲಸಕ್ಕೆ ತೆರಳಿದ್ದರು. ಮರುದಿನ ಸಂಜೆ ಮನೆಗೆ ವಾಪಸ್ಸಾದಾಗ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ.

ಮನೆಯ ಮುಂಭಾಗದ ಬಾಗಿಲಿನ ಬೀಗ ಮುರಿದು ಒಳನುಗ್ಗಿದ ಕಳ್ಳರು, ಕಪಾಟಿನಲ್ಲಿ ಇರಿಸಿದ್ದ ಸುಮಾರು 24 ಗ್ರಾಂ ತೂಕದ ಚಿನ್ನದ ನೆಕ್ಲೆಸ್, 3 ಚಿನ್ನದ ಉಂಗುರ, ಚಿನ್ನದ ಬೆಂಡೋಲೆ, ಚಿನ್ನದ ಜುಮ್ಕಿಗಳನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದಾರೆ.

ಕಳವಾದ ಚಿನ್ನದ ಒಟ್ಟು ಮೌಲ್ಯ 2,64,000ರೂ. ಎಂದು ಅಂದಾಜಿಸಲಾಗಿದೆ.

ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು ಬಳಿಕ ತನಿಖೆ ಕೈಗೊಂಡ ಪೊಲೀಸರು ಆರೋಪಿಗಳನ್ನು 24 ಗಂಟೆಯೊಳಗೆ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Leave a Reply

Your email address will not be published. Required fields are marked *