Breaking
19 Jun 2026, Fri

2 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಮಂಗಳೂರು: ಸುಮಾರು 2 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಉತ್ತರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಮಂಗಳೂರಿನ ಬಂದರು ರೋಡ್ ನಿವಾಸಿ, ಪ್ರಸ್ತುತ ಮಂಗಳೂರು, ಕುಲಶೇಖರ ನಿವಾಸಿ ಟಿ ಪಿ ಮುನೀರ್ ಅಹಮ್ಮದ್ ಅಲಿಯಾಸ್ ಅಹಮ್ಮದ್(59) ಎಂದು ಗುರುತಿಸಲಾಗಿದೆ.

ಆರೋಪಿಯು ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಹಿನ್ನೆಲೆ, ನ್ಯಾಯಾಲಯವು ಆತನ ವಿರುದ್ಧ ವಾರಂಟ್ ಹೊರಡಿಸಿತ್ತು.

ಏ. 25ರಂದು ಉತ್ತರ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಕುಲಶೇಖರದಲ್ಲಿರುವ ಆತನ ಬಾಡಿಗೆ ಮನೆಯಲ್ಲಿ ದಸ್ತಗಿರಿ ಮಾಡಿ, ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಳಿಕ ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Leave a Reply

Your email address will not be published. Required fields are marked *