Breaking
18 Jun 2026, Thu

ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿಯಾದ ಉಡುಪಿಯ ಕಮರ್ಷಿಯಲ್ ಕಟ್ಟಡ

ಉಡುಪಿ: ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ ನಿಂದ ಉಡುಪಿಯ ಸಿಟಿ ಬಸ್ ನಿಲ್ದಾಣ ಬಳಿಯ ಖಾಸಗಿ ಕಮರ್ಷಿಯಲ್ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿ ಹಲವು ಅಂಗಡಿಗಳು ಬೆಂಕಿಗಾಹುತಿಯಾದ ಘಟನೆ ನಡೆದಿದೆ.

ಖಾಸಗಿ ಕಮರ್ಷಿಯಲ್ ಕಟ್ಟದಲ್ಲಿದ್ದ ಮೊಬೈಲ್ ಶಾಪ್ ಹಾಗೂ ಹಾರ್ಡ್‌ವೇ‌ರ್ ಅಂಗಡಿಗೆ ಬೆಂಕಿ ತಗುಲಿ ಅಂಗಡಿಗಳಲ್ಲಿದ್ದ ವಸ್ತುಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ. ಈ ಅವಘಡದಿಂದ ಲಕ್ಷಾಂತರ ಮೌಲ್ಯದ ಸೊತ್ತುಗಳು ಸುಟ್ಟು ಹೋಗಿ ಅಪಾರ ನಷ್ಟವಾಗಿದೆ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ

Leave a Reply

Your email address will not be published. Required fields are marked *