ಬಂಟ್ವಾಳ: ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನವಾದ ಸಜೀಪ ನಡು ಶ್ರೀ ಕ್ಷೇತ್ರದಲ್ಲಿ ಶ್ರೀ ದೇವರಿಗೆ ರಂಗಪೂಜೆ ಸೇವೆ ಸಜೀಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್ ನೇತೃತ್ವದಲ್ಲಿ ಜರಗಿತು.

ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮುಳ್ಳುಂಜ ವೆಂಕಟೇಶ್ವರ ಭಟ್, ಅರ್ಚಕ ಗಣಪತಿ ಮಹಾಬಲೇಶ್ವರ ಭಟ್, ಕೆ ರಾಧಾಕೃಷ್ಣ ಆಳ್ವ, ಸುಧಾಕರ ಕೆಟಿ, ಕಿಶನ್ ಸೇಣವ, ರಾಮ ಬರೆ, ಸುಭಾಷ್ ಶೆಟ್ಟಿ, ಪ್ರದೀಪ್ ಶೆಟ್ಟಿ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.




