Breaking
19 Sep 2026, Sat

ಬರಿಮಾರು ಸರಕಾರಿ ಪ್ರಾಥಮಿಕ ಶಾಲಾ ಕಟ್ಟಡ ದುರಸ್ತಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದಿಂದ ಮಂಜುರಾದ ಅನುದಾನದ ಮಂಜುರಾತಿ ಪತ್ರ ಹಸ್ತಾಂತರ

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದಿಂದ ಬಂಟ್ವಾಳ ತಾಲೂಕು ಬರಿಮಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ದುರಸ್ತಿಗೆ ರೂಪಾಯಿ. 30 ಸಾವಿರ ಮಂಜೂರಾಗಿದ್ದು ಇದರ ಮಂಜೂರಾತಿ ಪತ್ರವನ್ನು ಹಸ್ತಾಂತರ ಮಾಡಲಾಯಿತು.

ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ಇದರ ಮಾಣಿ ವಲಯದ ಮೇಲ್ವಿಚಾರಕಿ ಆಶಾ ಪಾರ್ವತಿ, ಬರಿಮಾರು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ರೋಹಿಣಿ, ಸದಸ್ಯರಾದ ಶಶಿಪ್ರಭಾ, ನಳಿನಿ, ಶಾಲಾ ಮುಖ್ಯ ಶಿಕ್ಷಕಿ ಗಾಯತ್ರಿ, ಗ್ರಾಮಾಭಿವೃದ್ಧಿ ಯೋಜನೆಯ ಸೇವಾಪ್ರತಿನಿಧಿಗಳಾದ ಪುಷ್ಪಲತಾ, ಲಾವಣ್ಯ, ಬರಿಮಾರು ಒಕ್ಕೂಟದ ಕಾರ್ಯದರ್ಶಿ ಶಕುಂತಲಾ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *