ಬಂಟ್ವಾಳ: ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನವಾದ ಸಜೀಪ ನಡು ಶ್ರೀ ಕ್ಷೇತ್ರದಲ್ಲಿ ಸಾಮೂಹಿಕ ಶ್ರೀ ಆಶ್ಲೇಷ ಬಲಿ ಪೂಜೆ ಹಾಗೂ ಆಶ್ಲೇಷ ಬಲಿ ಹೋಮವು ಸಜೀಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಬಟ್ ನೇತೃತ್ವದಲ್ಲಿ ಜರಗಿತು.

ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮುಳ್ಳುಂಜ ವೆಂಕಟೇಶ್ವರ ಭಟ್, ಅರ್ಚಕ ಗಣಪತಿ ಮಹಾಬಲೇಶ್ವರ ಭಟ್, ಕೆ ರಾಧಾಕೃಷ್ಣ ಆಳ್ವ, ಸುಧಾಕರ ಕೆ ಟಿ, ಕಿಶನ್ ಸೇಣವ, ರಾಮ ಬರೆ, ಶುಭಾಶಶೆಟ್ಟಿ, ಪ್ರವೀಣ್ ಶೆಟ್ಟಿ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.




