Breaking
19 Sep 2026, Sat

ಪಡುಬಿದ್ರೆ: ಬೈಕ್‌ ಕಳವು ಮಾಡಿದ್ದ ಆರೋಪಿಯನ್ನು ಪಡುಬಿದ್ರೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಶ್ಯಾಡಗುಪ್ಪಿ ಗ್ರಾಮದ ಮಂಜುನಾಥ ಫಕೀರಪ್ಪ ವಾಲಿಕಾರ ಎಂದು ಗುರುತಿಸಲಾಗಿದೆ.

ಏ. 18 ರಂದು ಮುಲ್ಕಿ ಕಾರ್ನಾಡಿನ ನಿವಾಸಿ ವಾಸುದೇವ ಶೆಟ್ಟಿಗಾರ್ ಎಂಬವರು ಪಡುಬಿದ್ರಿ ಶ್ರೀನಾರಾಯಣ ಗುರು ಮಂದಿರದ ಬಳಿ ಬೈಕನ್ನು ನಿಲ್ಲಿಸಿದ್ದರು. ಬಳಿಕ ಕಳವು ಆಗಿರುವುದು ಬೆಳಕಿಗೆ ಬಂದಿದೆ.

ಈ ಕುರಿತು ಪಡುಬಿದ್ರೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೊಂಡ ಪೊಲೀಸರು ಆರೋಪಿಯನ್ನು ಬಂಧಿಸಿ ಆರೋಪಿಯಿಂದ ಕಳವು ಮಾಡಿದ 20,000 ರೂ. ಮೌಲ್ಯದ ಬೈಕ್‌ನ್ನು ವಶಪಡಿಸಿಕೊಳ್ಳಲಾಗಿದೆ.

ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

Leave a Reply

Your email address will not be published. Required fields are marked *