Breaking
19 Sep 2026, Sat

ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆ

ಕಡಬ: ಕುಮಾರಧಾರ ನದಿಯ ನೀರಿನ ಸೆಳೆತಕ್ಕೆ ಸಿಲುಕಿ ನಾಪತ್ತೆಯಾಗಿದ್ದ ಯುವಕನ ಮೃತದೇಹ ಏ. 27 ರಂದು ಪತ್ತೆಯಾಗಿದೆ.

ಮೃತ ಯುವಕನನ್ನು ಮಂಜು ಎಂಬುವವರ ಪುತ್ರ ರಕ್ಷಿತ್ (26) ಎಂದು ಗುರುತಿಸಲಾಗಿದೆ.

ಏ. 27 ರಂದು ಸಂಜೆ ರಕ್ಷಿತ್‌ ಅವರು ಸ್ನೇಹಿತರೊಂದಿಗೆ ಐತ್ತೂರು ಗ್ರಾಮದ ಅರಬ್ಬಿ ತೋಡು ಎಂಬಲ್ಲಿ ನೀರಿಗೆ ಇಳಿದಿದ್ದರು. ಈ ವೇಳೆ ನದಿಯ ಸುಳಿಗೆ ಸಿಲುಕಿ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದರು ಎಂದು ತಿಳಿದುಬಂದಿದೆ.

ಈ ಕುರಿತು ಪೊಲೀಸ್‌ ಠಾಣೆಗೆ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳಿಗೆ ಮಾಹಿತಿ ನೀಡಿದ್ದು ಸ್ಥಳಕ್ಕೆ ಧಾವಿಸಿದ ಅವರು ಕಾರ್ಯಚರಣೆ ಆರಂಭಿಸಿದ್ದರು. ಎಷ್ಟೇ ಹುಡುಕಾಡಿದರೂ ಮೃತದೇಹ ಪತ್ತೆಯಾಗಿಲ್ಲ. ಬಳಿಕ ಈಶ್ವರ್ ಮಲ್ಪೆ ಮತ್ತು ಅವರ ತಂಡ ಸ್ಥಳಕ್ಕೆ ಆಗಮಿಸಿ, ಸುಮಾರು 30 ಅಡಿ ಆಳದಲ್ಲಿ ಸಿಲುಕಿದ್ದ ಮೃತದೇಹವನ್ನು ಹೊರತೆಗೆದಿದ್ದಾರೆ.

Leave a Reply

Your email address will not be published. Required fields are marked *