ಬಂಟ್ವಾಳ: ಏ.28 – 2025-26 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 620 ಅಂಕಗಳನ್ನು ಗಳಿಸಿ, ಬಂಟ್ವಾಳ ತಾಲೂಕಿಗೆ ಪ್ರಥಮ ಸ್ಥಾನಿಯಾದ ಹಾಗೂ ರಾಜ್ಯಕ್ಕೆ ಆರನೇ ರ್‍ಯಾಂಕ್ ಪಡೆದ ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಪೂರ್ವಿ ಎ. ಭಾರದ್ವಾಜ್ ನ್ನು ಬಂಟ್ವಾಳ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ಮಾಲತಿ ಕೆ. ಏಪ್ರಿಲ್ 28 ರಂದು ಶಾಲೆಗೆ ಭೇಟಿ ನೀಡಿ ಅಭಿನಂದಿಸಿದರು.

ಪರೀಕ್ಷೆ ಬರೆದ 79 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣಗೊಳ್ಳಲು ಹಾಗೂ ಬಂಟ್ವಾಳ ತಾಲೂಕಿನಲ್ಲಿ ಸಂಸ್ಥೆ ಮುಂಚೂಣಿಯಲ್ಲಿರಲು ಶ್ರಮಿಸಿದ ಶಾಲೆಯ ಶಿಕ್ಷಕ ವೃಂದವನ್ನು ಹಾಗೂ ಶಾಲಾ ಆಡಳಿತ ಮಂಡಳಿಯ ಕಾರ್ಯ ವೈಖರಿಯನ್ನು ಇವರು ಈ ಸಂದರ್ಭದಲ್ಲಿ ಶ್ಲಾಘಿಸಿದರು.

ಅಭಿನಂದನಾ ಕಾರ್ಯಕ್ರಮದಲ್ಲಿ ಶಿಕ್ಷಣ ಸಂಯೋಜಕ ರಮಾನಂದ, ಸುಧಾ, ಪ್ರತಿಮಾ, ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಪ್ರಹ್ಲಾದ ಶೆಟ್ಟಿ ಜೆ, ಶಾಲಾ ಮುಖ್ಯೋಪಾಧ್ಯಾಯಿನಿ ಶ ಸುಪ್ರಿಯಾ ಡಿ, ಸಾಧಕ ವಿದ್ಯಾರ್ಥಿನಿಯ ಪೋಷಕರಾದ ಅಮಿತ್ ಕುಮಾರ್ ಬಿ. ಜೆ. ಶಿಲ್ಪಾ ಸಿ. ಹಾಗೂ ಶಾಲೆಯ ಶಿಕ್ಷಕ- ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು.


