ಮಂಜೇಶ್ವರ: ಕಾರಿನಲ್ಲಿ ಎಂಡಿಎಂಎ ಮಾದಕ ವಸ್ತು ಸಾಗಿಸುತ್ತಿದ್ದ ಮೂವರನ್ನು ಮಂಜೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಕಾಸರಗೋಡು ಅಲಂಪಾಡಿಯ ಸಿ ಎ.ಮುಹಮ್ಮದ್ ಸಹಲ್ , ಎರ್ನಾಕುಲಂ ನ ಅರುಣ್ ಕುಮಾರ್, ವಡಗರದ ಎಂ. ಪಿ ಅನೂಷ್ ಎಂದು ಗುರುತಿಸಲಾಗಿದೆ.

ಸ್ವಿಫ್ಟ್ ಕಾರಿನಲ್ಲಿ ಮಾದಕ ವಸ್ತು ಸಾಗಿಸುತ್ತಿದ್ದಾರೆ ಎಂಬ ಖಚಿತ ಮಾಹಿತಿ ಪಡೆದ ಮಂಜೇಶ್ವರ ಪೊಲೀಸರು ಕಾರನ್ನು ತಡೆದು ಪರಿಶೀಲಿಸಿದಾಗ ಮಾದಕ ವಸ್ತು ಪತ್ತೆಯಾಗಿದೆ. ಬಳಿಕ ಆರೋಪಿಗಳನ್ನು ಬಂಧಿಸಲಾಗಿದೆ.







