Breaking
29 Apr 2026, Wed

ಹೋಂಸ್ಟೇಗಳ ಮೇಲೆ ಉಡುಪಿ ಪೊಲೀಸರ ವಿಶೇಷ ಕಾರ್ಯಾಚರಣೆ: 32 ಅಕ್ರಮ ಹೋಂಸ್ಟೇಗಳು ಪತ್ತೆ

ಉಡುಪಿ: ವಿಶೇಷ ಕಾರ್ಯಾಚರಣೆ ನಡೆಸಿದ ಉಡುಪಿ ಜಿಲ್ಲಾ ಪೊಲೀಸರು 32 ಅಕ್ರಮ ಹೋಂಸ್ಟೇಗಳನ್ನು ಪತ್ತೆ ಹಚ್ಚಿದ್ದಾರೆ.

ಕೊಡಗು ಜಿಲ್ಲೆಯ ಹೋಂಸ್ಟೇಯೊಂದರಲ್ಲಿ ನಡೆದ ವಿದೇಶಿ ಮಹಿಳೆಯ ಅತ್ಯಾಚಾರ ಪ್ರಕರಣದ ಹಿನ್ನಲೆಯಲ್ಲಿ ಈ ಕಾರ್ಯಾಚರಣೆ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.

ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 3, ಮಲ್ಪೆ ಠಾಣೆಯಲ್ಲಿ 15, ಮಣಿಪಾಲದಲ್ಲಿ 2, ಕೋಟ ಠಾಣೆಯಲ್ಲಿ 7 ಹಾಗೂ ಪಡುಬಿದ್ರೆ ಠಾಣಾ ವ್ಯಾಪ್ತಿಯಲ್ಲಿ 5 ಅಕ್ರಮ ಹೋಂಸ್ಟೇಗಳು ಪತ್ತೆಯಾಗಿದೆ. ಪತ್ತೆಯಾದ ಹೋಂಸ್ಟೇಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪ್ರವಾಸೋದ್ಯಮ ಇಲಾಖೆಗೆ ವರದಿ ಸಲ್ಲಿಸಲಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.

ಇದಲ್ಲದೇ ಪರವಾನಿಗೆ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಎಚ್ಚರಿಕೆ ನೀಡಲಾಗಿದೆ. ನಿಯಮ ಉಲ್ಲಂಘಿಸಿದರೆ ಪರವಾನಿಗೆ ರದ್ದುಪಡಿಸಲಾಗುವುದು ಎಂದು ತಿಳಿಸಿದೆ.

Leave a Reply

Your email address will not be published. Required fields are marked *