Breaking
19 Sep 2026, Sat

ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ವಿಧ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೇ ಸಾವು

ಉಡುಪಿ: ಕಾರು ಹಾಗೂ ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ನಡೆದಿದೆ.

ಮೃತಪಟ್ಟ ವಿದ್ಯಾರ್ಥಿಯನ್ನು ಪ್ರೇರಣಾ ಮೂಲ್ಯ ಎಂದು ಗುರುತಿಸಲಾಗಿದೆ.

ಏ. 24 ರಂದು ಸಿಇಟಿ ಪರೀಕ್ಷೆ ಬರೆದು ತಂದೆ ನವೀನ್‌ ಚಂದ್ರ ಅವರೊಂದಿಗೆ ಮನೆಗೆ ವಾಪಸ್ಸಾಗುತ್ತಿದ್ದ ವೇಳೆ, ಕಾರ್ಕಳದಿಂದ ನಿಟ್ಟೆ ಕಡೆಗೆ ಬರುತ್ತಿದ್ದ ವೇಳೆ ಕಾರು ಬೈಕ್‌ಗೆ ಢಿಕ್ಕಿ ಹೊಡೆದಿತ್ತು. ಢಿಕ್ಕಿಯ ತೀವ್ರತೆಗೆ ನವೀನ್‌ಚಂದ್ರ ಹಾಗೂ ಪ್ರೇರಣಾ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣವೇ ಇಬ್ಬರನ್ನು ಆಸ್ಪತ್ರೆಗೆ ದಾಖಲಾಯಿತು.

ಆದರೆ ಘಟನೆಯ ದಿನವೇ ನವೀನ್‌ಚಂದ್ರ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು , ಚಿಕಿತ್ಸೆ ಪಡೆಯುತ್ತಿದ್ದ ಪ್ರೇರಣಾ ಏ. 27 ರಂದು ಮೃತಪಟ್ಟಿದ್ದಾರೆ.

Leave a Reply

Your email address will not be published. Required fields are marked *