ಪುತ್ತೂರು: ಲಾರಿ ಹಾಗೂ ಸ್ಕೂಟಿ ನಡುವೆ ಸಂಭವಿಸಿದ ಅಪಘಾತದಲ್ಲಿ ಸ್ಕೂಟಿ ಸವಾರ ಸ್ಥಳದಲ್ಲೇ ಸವಾನ್ನಪ್ಪಿದ್ದು ಸಹಸವಾರೆ ಗಂಭೀರ ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ವಳಾಲು ನೀರಕಟ್ಟೆ ಎಂಬಲ್ಲಿ ನಡೆದಿದೆ.

ಮೃತಪಟ್ಟ ವ್ಯಕ್ತಿಯನ್ನು ಪೆರಿಯಡ್ಕ ಸಮೀಪದ ಬೊಳ್ಳಾವು ನಿವಾಸಿ ಶಿವಣ್ಣ ಸಪಲ್ಯ ಎಂಬವರ ಪುತ್ರ ಕಾರ್ತಿಕ್ (19) ಎಂದು ಗುರುತಿಸಲಾಗಿದೆ.

ಏ. 29 ರಂದು ಕಾರ್ತಿಕ್ ಅವರು ಹಿರೆಬಂಡಾಡಿ ಗ್ರಾಮದ ಎಲಿಯ ನಿವಾಸಿಯಾಗಿರುವ ಅಧ್ಯಾಪಕಿಯೊಬ್ಬರ ಮಗಳನ್ನು ಸ್ಕೂಟಿಯ ಹಿಂಭಾಗದಲ್ಲಿ ಕುಳ್ಳಿರಿಸಿಕೊಂಡು ಹೋಗುತ್ತಿದ್ದ ವೇಳೆ ಲಾರಿಗೆ ಸ್ಕೂಟಿ ಸವಾರ ಡಿಕ್ಕಿಯಾಗಿದೆ.

ಡಿಕ್ಕಿಯ ರಭಸಕ್ಕೆ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು ಸಹಸವಾರೆ ಗಂಭೀರ ಗಾಯಗೊಂಡಿದ್ದಾರೆ. ತಕ್ಷಣವೇ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ಪುತ್ತೂರು ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.


