ಬೈಂದೂರು: ತಾಲೂಕಿನ ತ್ರಾಸಿ ಬೀಚ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ಪ್ರವಾಸಿ ಮಿನಿ ಬಸ್ ಡಿಕ್ಕಿಯಾಗಿ ಮೂವರು ಮೃತಪಟ್ಟಿದ್ದು, ಹಲವರು ಗಾಯಗೊಂಡ ಘಟನೆ ಏ. 29 ರಂದು ನಡೆದಿದೆ.

ಮಿನಿ ಬಸ್ ಮುರುಡೇಶ್ವರದಿಂದ ಉಡುಪಿ ಕಡೆಗೆ ಪ್ರಯಾಣಿಸುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಬಸ್ಸಿನಲ್ಲಿ ಸುಮಾರು 47 ಪ್ರಯಾಣಿಕರಿದ್ದರು ಎಂದು ತಿಳಿದುಬಂದಿದೆ.

ಅಪಘಾತದಲ್ಲಿ ಮೂವರು ಮೃತಪಟ್ಟಿದ್ದು ಹಲವರಿಗೆ ಗಂಭೀರ ಗಾಯಗಳಾಗಿದೆ. ಗಾಯಾಳುಗಳನ್ನು ಕುಂದಾಪುರದ ಹತ್ತಿರದ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.



