Breaking
26 Sep 2026, Sat

ರಸ್ತೆ ದಾಟುತ್ತಿದ್ದ ಪಾದಚಾರಿಗೆ ಕಾರು ಡಿಕ್ಕಿ: ಪಾದಚಾರಿ ಸಾವು

ಬಂಟ್ವಾಳ: ಪಾಣೆಮಂಗಳೂರು ಬಳಿ ರಸ್ತೆ ದಾಟುತ್ತಿದ್ದ ಪಾದಚಾರಿಗೆ ಕಾರು ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಪಾದಚಾರಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಮೇ. 03 ರಂದು ನಡೆದಿದೆ.

ಮೃತಪಟ್ಟ ವ್ಯಕ್ತಿಯನ್ನು ಪುತ್ತೂರು ನಿವಾಸಿ, ವಿಶ್ವನಾಥ ರೈ( 63) ಎಂದು ಗುರುತಿಸಲಾಗಿದೆ.

ಪಾಣೆಮಂಗಳೂರಿನ ನೆಹರು ನಗರದಲ್ಲಿರುವ ಸಾಗರ್ ಆಡಿಟೋರಿಯಂನಲ್ಲಿ ಸಂಬಂಧಿಕರ ಮದುವೆ ಕಾರ್ಯಕ್ರಮಕ್ಕೆ ಬಂದು ವಾಪಸ್ಸಾಗುತ್ತಿದ್ದಾಗ ಬಿ.ಸಿ.ರೋಡಿನಿಂದ ಮೆಲ್ಕಾರ್ ಕಡೆಗೆ ಅತೀ ವೇಗದಿಂದ ಬಂದ ಕಾರೊಂದು ಡಿಕ್ಕಿಯಾಗಿದೆ.

ಡಿಕ್ಕಿಯ ರಭಸಕ್ಕೆ ವಿಶ್ವನಾಥ ಅವರು ಗಂಭೀರ ಗಾಯಗೊಂಡಿದ್ದು ಅವರನ್ನು ತಕ್ಷಣವೇ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.

Leave a Reply

Your email address will not be published. Required fields are marked *