ಮೂಡಬಿದಿರೆ: ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡು ತೋಟದಲ್ಲಿದ್ದ ತೆಂಗು ಹಾಗೂ ವಿವಿಧ ಮರಗಿಡಗಳು ಸುಟ್ಟು ಭಸ್ಮವಾದ ಘಟನೆ ಇರುವೈಲು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೆಂಪುಗುಡ್ಡೆ ಎಂಬಲ್ಲಿ ನಡೆದಿದೆ.

ಕಾಲೂರು ರಾಜೇಶ್ ಪೂಜಾರಿ ಎಂಬುವವರಿಗೆ ಸೇರಿದ ತೋಟ ಇದಾಗಿದ್ದು ಶಾರ್ಟ್ ಸರ್ಕ್ಯೂಟ್‌ನಿಂದ ಈ ಅವಘಡ ಸಂಭವಿಸಿದೆ. ತಕ್ಷಣವೇ ಅಗ್ನಿಶಾಮಕ ಸಿಬ್ಬಂದಿಗಳಿಗೆ ಮಾಹಿತಿಯನ್ನು ನೀಡಿದ್ದು ಸ್ಥಳಕ್ಕೆ ಧಾವಿಸಿದ ಸಿಬ್ಬಂದಿಗಳು ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.




