Breaking
11 May 2026, Mon

ರಾಜ್ಯ ಮಟ್ಟದ ಮುಕ್ತ ಯೋಗಾಸನ ಸ್ಪರ್ಧೆ

ಮೈಸೂರು: ಸುವರ್ಣ ಬೆಳಕು ಫೌಂಡೇಷನ್ ವತಿಯಿಂದ ಭಾನುವಾರ ರಾಜ್ಯ ಮಟ್ಟದ ಮುಕ್ತ ಯೋಗಾಸನ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.

ಶಾಸಕ ಟಿ. ಎಸ್. ಶ್ರೀವತ್ಸ, ಶ್ರೀ ಯೋಗಾನರಸಿಂಹಸ್ವಾಮಿ ದೇವಾಲಯದ ಆಡಳಿತಾಧಿಕಾರಿ ಎನ್. ಶ್ರೀನಿವಾಸನ್, ಸಮಾಜ ಸೇವಕರಾದ ಡಾ. ರಘುರಾಂ ವಾಜಪೇಯಿ, ಎಂ. ಎನ್. ನವೀನ್ ಕುಮಾರ್ ಸೇರಿದಂತೆ ಇನ್ನಿತರ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಶುಭಹಾರೈಸಿದರು.

ಮೈಸೂರಿನ ಪ್ರತಿಷ್ಠಿತ ಶಾಲೆಯಾದ ಶ್ರೀಕಾಂತ್ ವಿದ್ಯಾ ಸಂಸ್ಥೆಯಲ್ಲಿ ಈ ಕಾರ್ಯಕ್ರಮ ಆಯೋಜಿಸಿದ್ದು, ಬೆಳಗ್ಗೆ ಉದ್ಘಾಟನಾ ಸಮಾರಂಭ ಹಾಗೂ ಸಂಜೆ ಸಮಾರೋಪ ಸಮಾರಂಭ ನಡೆಯಿತು.

ಕಾರ್ಯಕ್ರಮದ ಅಂಗವಾಗಿ ಯೋಗ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನ ಹಾಗೂ ಉಚಿತ ನೇತ್ರ ತಪಾಸಣಾ ಶಿಬಿರವನ್ನು ಸಹ ಆಯೋಜಿಸಲಾಗಿತ್ತು.

ವಿಶೇಷವಾಗಿ ಸ್ಪರ್ಧೆಯಲ್ಲಿ “ಚಾಂಪಿಯನ್ ಆಫ್ ಚಾಂಪಿಯನ್” ಟ್ರೋಫಿ ಗೆದ್ದವರಿಗೆ ಸುವರ್ಣ ಬೆಳಕು ಫೌಂಡೇಷನ್ ಲೋಗೋ ವಿನ್ಯಾಸ ಹೊಂದಿರುವ ವಿಶೇಷ ಟ್ರೋಫಿಯನ್ನು ಪ್ರದಾನ ಮಾಡಲಾಯಿತು.

ಈ ಸಂದರ್ಭದಲ್ಲಿ ಸುವರ್ಣ ಬೆಳಕು ಫೌಂಡೇಷನ್‌ನ ಮಹೇಶ್, ಯೋಗ ಶಿಕ್ಷಕರಾದ ಪಶುಪತಿ, ರವಿ, ಮಂಜುನಾಥ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *