ಉಡುಪಿ: ಬಾವಿಗೆ ಬಿದ್ದ ಮೂವರು ಕಾರ್ಮಿಕರ ರಕ್ಷಣೆ

ಉಡುಪಿ: ಜಿಲ್ಲೆಯಲ್ಲಿ ಮಣ್ಣು ತೆಗೆಯುವ ವೇಳೆ ಬಾವಿಗೆ ಬಿದ್ದ ಮೂವರು ಕಾರ್ಮಿಕರನ್ನು ಕಾರ್ಕಳ ಅಗ್ನಿಶಾಮಕ ದಳದ ಸಿಬ್ಬಂದಿ ಯಶಸ್ವಿಯಾಗಿ ರಕ್ಷಿಸಿದ ಘಟನೆ ನಡೆದಿದೆ.

ರಾಜೇಶ್ (42), ಪವನ್ (29) ಹಾಗೂ ಗೋಪಾಲ್ ನಾಯ್ಕ (52) ಬಾವಿಯ ಮಣ್ಣು ತೆಗೆಯಲು ಬಾವಿಗಿಳಿದಿದ್ದರು. ಈ ವೇಳೆ ರಾಜೇಶ್ ಮೇಲಕ್ಕೆ ಬರುತ್ತಿದ್ದಾಗ ಕಾಲು ಜಾರಿ ಬಿದ್ದು ಗಾಯಗೊಂಡಿದ್ದಾರೆ. ಅವರನ್ನು ರಕ್ಷಿಸಲು ಮುಂದಾದ ಪವನ್ ಮತ್ತು ಗೋಪಾಲ್ ನಾಯ್ಕ ಕೂಡ ಬಾವಿಯಲ್ಲೇ ಸಿಲುಕಿಕೊಂಡರು.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಕಾರ್ಕಳ ಅಗ್ನಿಶಾಮಕ ದಳ ಸ್ಥಳಕ್ಕಾಗಮಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿತು. ಸಿಬ್ಬಂದಿ ಮೂವರನ್ನೂ ಸುರಕ್ಷಿತವಾಗಿ ಮೇಲಕ್ಕೆತ್ತುವಲ್ಲಿ ಯಶಸ್ವಿಯಾದರು.

ಗಾಯಗೊಂಡ ರಾಜೇಶ್ ಅವರನ್ನು ತಕ್ಷಣ ಅಂಬುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *