ಮಂಗಳೂರು: ನಗರದ ಕಂಕನಾಡಿ ಸುವರ್ಣ ಲೈನ್ 6ನೇ ಅಡ್ಡರಸ್ತೆಯ ಪಾರ್ಕಿಂಗ್ ಪ್ರದೇಶದಲ್ಲಿ ನಿಲ್ಲಿಸಲಾಗಿದ್ದ ಸ್ಕೂಟರ್ ಕಳುವಾಗಿರುವ ಘಟನೆ ಬೆಳಕಿಗೆ ಬಂದಿದೆ.

ಸಂತೋಷ್ ಕುಮಾರ್ ಅವರು ತಮ್ಮ ಸ್ಕೂಟರನ್ನು ಪಾರ್ಕಿಂಗ್ ಜಾಗದಲ್ಲಿ ನಿಲ್ಲಿಸಿ ತೆರಳಿದ್ದರು. ಬಳಿಕ ಮರಳಿ ಬಂದು ಪರಿಶೀಲಿಸಿದಾಗ ಸ್ಕೂಟರ್ ನಿಲ್ಲಿಸಿದ್ದ ಸ್ಥಳದಲ್ಲಿ ಕಾಣಿಸದೇ ಇದ್ದುದಾಗಿ ದೂರಿನಲ್ಲಿ ತಿಳಿಸಿದ್ದಾರೆ.

ಕಳವಾದ ಸ್ಕೂಟರ್‌ನ್ನು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹುಡುಕಿದರೂ ಪತ್ತೆಯಾಗಿಲ್ಲ ಎಂದು ಹೇಳಲಾಗಿದೆ. ಈ ಕುರಿತು ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.



