Breaking
13 May 2026, Wed

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದರ್ಶನ ಅವಧಿ ವಿಸ್ತರಣೆ

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡುವ ಭಕ್ತರಿಗೆ ಅನುಕೂಲವಾಗುವಂತೆ ದೇವರ ದರ್ಶನದ ಅವಧಿಯನ್ನು ಹೆಚ್ಚುವರಿ 1 ಗಂಟೆ ವಿಸ್ತರಿಸಲಾಗಿದೆ.

ಈ ಮೊದಲು ಪ್ರತಿದಿನ ಮಧ್ಯಾಹ್ನ 1.30ರಿಂದ 3.30ರ ವರೆಗೆ ದೇವರ ದರ್ಶನ ಸ್ಥಗಿತಗೊಳಿಸಲಾಗುತ್ತಿತ್ತು. ಆದರೆ, ಹೊಸ ವೇಳಾಪಟ್ಟಿಯಂತೆ ಈಗ ಮಧ್ಯಾಹ್ನ 2ರಿಂದ 3ರ ವರೆಗೆ ಮಾತ್ರ ದರ್ಶನ ಬಂದ್ ಇರಲಿದೆ.
ಹೊಸ ವೇಳಾಪಟ್ಟಿಯ ಪ್ರಕಾರ ಬೆಳಗ್ಗೆ 6.30ರಿಂದ ಮಧ್ಯಾಹ್ನ 2ರ ವರೆಗೆ ಹಾಗೂ ಮಧ್ಯಾಹ್ನ 3ರಿಂದ ರಾತ್ರಿ 8.30ರವರೆಗೆ ಭಕ್ತರಿಗೆ ದೇವರ ದರ್ಶನದ ವ್ಯವಸ್ಥೆ ಕಲ್ಪಿಸಲಾಗಿದೆ.

ಮಹಾಮಂಗಳಾರತಿ ಸಮಯದಲ್ಲಿ ಮಾತ್ರ ಹಿಂದಿನಂತೆ ಅಲ್ಪಕಾಲದವರೆಗೆ ದರ್ಶನ ಇರುವುದಿಲ್ಲ ಎಂದು ದೇವಾಲಯ ಆಡಳಿತ ಮಂಡಳಿ ತಿಳಿಸಿದೆ.

ಈ ಹೊಸ ವ್ಯವಸ್ಥೆ ಮೇ 10ರಿಂದಲೇ ಜಾರಿಯಾಗಿದ್ದು, ಭಕ್ತರು ಇದರ ಸದುಪಯೋಗ ಪಡೆದುಕೊಳ್ಳುವಂತೆ ದೇವಾಲಯ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *