ಬಂಟ್ವಾಳ: ತಾಲೂಕಿನ ಇರಾ ಗ್ರಾಮದ ಕಿನ್ನಿಮಜಲು ಪ್ರದೇಶದಲ್ಲಿ ಆಟೋ ರಿಕ್ಷಾವೊಂದು ಪಲ್ಟಿಯಾದ ಘಟನೆ ನಡೆದಿದೆ.

ರಾತ್ರಿ ಸುಮಾರು 2 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು, ಉದ್ಯಾವರ ಮಾಡ ಕ್ಷೇತ್ರದ ಜಾತ್ರಾ ಮಹೋತ್ಸವದಿಂದ ಚಟ್ಟೆಕಲ್ಲು ಕಡೆಗೆ ಹಿಂದಿರುಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ರಸ್ತೆಯಿಂದ ಪಕ್ಕದ ತೋಟಕ್ಕೆ ಉರುಳಿದೆ ಎನ್ನಲಾಗಿದೆ.

ರಿಕ್ಷಾದಲ್ಲಿ ಚಾಲಕ ಸೇರಿದಂತೆ ನಾಲ್ವರು ಪ್ರಯಾಣಿಸುತ್ತಿದ್ದರು. ಅದೃಷ್ಟವಶಾತ್ ಯಾರಿಗೂ ಗಂಭೀರ ಗಾಯಗಳಾಗಿಲ್ಲ. ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.



