Breaking
14 May 2026, Thu

ಉತ್ತರ ಪ್ರದೇಶದಲ್ಲಿ ಭೀಕರ ಬಿರುಗಾಳಿ ಮಳೆ; 74 ಮಂದಿ ದುರ್ಮರಣ, ಹಲವೆಡೆ ರೆಡ್ ಅಲರ್ಟ್

ಉತ್ತರ ಪ್ರದೇಶ: ರಾಜ್ಯದ ವಿವಿಧ ಭಾಗಗಳಲ್ಲಿ ಬುಧವಾರ ಸಂಜೆ ಅಪ್ಪಳಿಸಿದ ಭೀಕರ ಬಿರುಗಾಳಿ, ಗುಡುಗು-ಮಿಂಚು ಸಹಿತ ಮಳೆ ಹಾಗೂ ಆಲಿಕಲ್ಲು ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಪ್ರಕೃತಿಯ ಈ ರೌದ್ರಾವತಾರಕ್ಕೆ ಇದುವರೆಗೆ 74 ಮಂದಿ ಮೃತಪಟ್ಟಿರುವುದಾಗಿ ವರದಿಯಾಗಿದೆ.

ಪ್ರಯಾಗ್ರಾಜ್ ಮತ್ತು ಉನ್ನಾವ್ ಜಿಲ್ಲೆಗಳಲ್ಲಿ ಅತಿ ಹೆಚ್ಚು ಸಾವು-ನೋವುಗಳು ಸಂಭವಿಸಿದ್ದು, ಹಲವು ಕಡೆ ಗೋಡೆ ಕುಸಿತ, ಮರಗಳು ನೆಲಕ್ಕುರುಳುವುದು ಹಾಗೂ ಸಿಡಿಲು ಬಡಿದ ಪರಿಣಾಮ ದುರಂತಗಳು ನಡೆದಿವೆ. ನೂರಾರು ಮಂದಿ ಗಾಯಗೊಂಡಿದ್ದು, ಅನೇಕರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಭಾರೀ ಗಾಳಿ-ಮಳೆಯಿಂದ ರಾಜ್ಯದ ಹಲವು ಭಾಗಗಳಲ್ಲಿ ವಿದ್ಯುತ್ ಕಂಬಗಳು ಉರುಳಿಬಿದ್ದಿದ್ದು, ವಿದ್ಯುತ್ ಸಂಪರ್ಕ ಸಂಪೂರ್ಣ ವ್ಯತ್ಯಯಗೊಂಡಿದೆ. ರಸ್ತೆ ಸಂಚಾರಕ್ಕೂ ಅಡಚಣೆ ಉಂಟಾಗಿದ್ದು, ರಕ್ಷಣಾ ಕಾರ್ಯಾಚರಣೆಗಳು ಮುಂದುವರಿದಿವೆ.

ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಹವಾಮಾನ ಇಲಾಖೆ ರಾಜ್ಯದ 38 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದೆ. ಇನ್ನೂ ಕೆಲ ಭಾಗಗಳಲ್ಲಿ ಮುಂದಿನ ಗಂಟೆಗಳಲ್ಲಿ ಭಾರೀ ಮಳೆ ಮತ್ತು ಬಿರುಗಾಳಿ ಬೀಸುವ ಸಾಧ್ಯತೆ ಇರುವುದಾಗಿ ಎಚ್ಚರಿಕೆ ನೀಡಲಾಗಿದೆ.

Leave a Reply

Your email address will not be published. Required fields are marked *